35 C
Hubli
ಮಾರ್ಚ್ 28, 2023
eNews Land
ರಾಜ್ಯ

ರಾಜ್ಯದ ಎಲ್ಲ ಪ್ರಾದೇಶಿಕ ವಲಯದಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ : ಸಿಎಂ

Listen to this article

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಜನಜಾಗೃತಿ ಅಭಿಯಾನ

ಇಎನ್ಎಲ್ ಬೆಂಗಳೂರು: ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ‘ಆರೈಕೆಯ ಅಂತರವನ್ನು ಕಡಿತಗೊಳಿಸಿ’ ಎಂಬ ಘೋಷ ವಾಕ್ಯವನ್ನು ಬಿಡುಗಡೆ ಮಾಡಿದರು.

ಸುಲಭ ದರದಲ್ಲಿ ಪೆಟ್ ಸ್ಕ್ಯಾನ್ ಪರೀಕ್ಷೆ :
ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ ಎರಡು ಪೆಟ್ ಸ್ಕ್ಯಾನ್ ಮೆಷಿನ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕ್ಯಾನ್ಸರ್ ರೋಗವನ್ನು ಪತ್ತೆಹಚ್ಚುವ ಪೆಟ್ ಸ್ಕ್ಯಾನ್ ಪರೀಕ್ಷೆ ಖಾಸಗಿ ಆಸ್ಪತ್ರೆಯಲ್ಲಿ 25,000 ರೂ.ಗಳವರೆಗೆ ವೆಚ್ಚವಾಗುತ್ತದೆ. ಬಡರೋಗಿಗಳಿಗೆ ಸಹಾಯ ಒದಗಿಸುವ ಉದ್ದೇಶದಿಂದ ಸರ್ಕಾರ ಈ ದುಬಾರಿ ಸ್ಕ್ಯಾನ್ ಸೌಲಭ್ಯವನ್ನು ಕೇವಲ 8 ರಿಂದ 10 ಸಾವಿರದೊಳಗೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಜನೌಷಧಿ ಕೇಂದ್ರದಲ್ಲಿ ಕ್ಯಾನ್ಸರ್ ಔಷಧಿ ಲಭ್ಯವಾಗಿಸಲು ಚಿಂತನೆ: ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ಔಷಧಿಗಳು ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಔಷಧಿಗಳನ್ನು ಲಭ್ಯವಾಗಿಸಲು ಸಂಬಂಧಪಟ್ಟ ತಯಾರಿಕಾ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಜನೌಷಧಿ ಕೇಂದ್ರಗಳಲ್ಲಿ ಕ್ಯಾನ್ಸರ್ ಔಷಧಿಗಳು ಸುಲಭ ದರದಲ್ಲಿ ದೊರಕಿಸಿಕೊಡಲು ಚಿಂತನೆ ನಡೆಸಲಾಗಿದೆ. ಇಡೀ ರಾಜ್ಯದಲ್ಲಿ ಅಗ್ಗ ದರದಲ್ಲಿ ಕ್ಯಾನ್ಸರ್ ಔಷಧಿಗಳನ್ನು ಪೂರೈಸುವ ಸೊಸೈಟಿಯನ್ನು ಸ್ಥಾಪಿಸುವ ಯೋಜನೆಯಿದೆ. ಕ್ಯಾನ್ಸರ್ ಹಾಗೂ ಇನ್ನಿತರ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಸೇರಿದಂತೆ ಆರೋಗ್ಯ ಮೂಲಸೌಕರ್ಯವನ್ನು ತಾಾಾಲೂಕು ಮಟ್ಟದಿಂದ ಅಭಿವೃದ್ಧಿ ಮಾಡುವ ಮೂಲಕ ಆರೋಗ್ಯ ಕರ್ನಾಟಕದ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Related posts

ಧಾರವಾಡದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೈಠಕ್

eNEWS LAND Team

ಕನ್ನಡ ಸಮೃದ್ದ ತಾಂತ್ರಿಕ ಭಾಷೆಯಾಗುವ ಅಗತ್ಯವಿದೆ : ಸಚಿವ ಕತ್ತಿ

eNEWS LAND Team

ಹಿಜಾಬ್ ನಿರ್ಬಂಧ ಖಂಡಿಸಿ ಹುಬ್ಬಳ್ಳಿಯಲ್ಲಿ ಅಂಜುಮನ್ ಸಂಸ್ಥೆ ಬೃಹತ್ ಪ್ರತಿಭಟನೆ

eNewsLand Team