27 C
Hubli
ಏಪ್ರಿಲ್ 29, 2024
eNews Land
ರಾಜಕೀಯ ರಾಜ್ಯ ಸುದ್ದಿ

ಉಮ್ಮಳಿಸಿ ಬಂದ ದುಃಖ ತಡೆದು ಮಾತನಾಡಿದ ಸಿಎಂ; ಯಾಕೆ ಗೊತ್ತಾ? ಇದು ದೇಶದ ವಿಷ್ಯ!!

ಇಎನ್ಎಲ್ ವಾರ್ತೆ ಚಿತ್ರದುರ್ಗ:
ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ನೆನೆದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾದ ಘಟನೆ ಚಿತ್ರದುರ್ಗದ  ಸಿರಿಗೆರೆ ತರಳುಬಾಳು ಬೃಹನ್ಮಠದ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ತರಳುಬಾಳು ಹುಣ್ಣಿಮೆ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ನಡೆಯಿತು.

ದೇಶಕ್ಕಾಗಿ ಹೋರಾಡಿ ವೀರ ಮರಣ ಹೊಂದಿದ ಸೈನಿಕರ ಪತ್ನಿಯರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿತ್ತು. ಸೈನಿಕರು ವೀರ ಮರಣ ಹೊಂದಿದ ಬಗ್ಗೆ ಸಭೆಯಲ್ಲಿ ವಿವರಣೆ ನೀಡಲಾಗುತ್ತಿತ್ತು.

ವೀರ ಮರಣ ಹೊಂದಿದ ಸೈನಿಕರ ಪತ್ನಿಯರಿಗೆ ಶ್ರೀಮಠದಿಂದ ಸನ್ಮಾನಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭಾವುಕರಾದರು. ವೀರಮರಣ ಹೊಂದಿದ ಸೈನಿಕರ ಪತ್ನಿಯರಿಗೆ ಸಿರಿಗೆರೆ ತರಳುಬಾಳು ಬೃಹನ್ಮಠದಿಂದ ಸನ್ಮಾನ ಮಾಡಲಾಯಿತು. ತಲಾ ರೂ.50 ಸಾವಿರ ರೂಪಾಯಿಗಳಂತೆ ಒಟ್ಟು ಒಂಭತ್ತು ಕುಟುಂಬಗಳಿಗೆ ಶ್ರೀಮಠದ ವತಿಯಿಂದ ಚೆಕ್ ವಿತರಿಸಲಾಯಿತು.

ವೀರ ಮರಣ ಹೊಂದಿದ ಸೈನಿಕರ ಪತ್ನಿಯರು ಕುಂದುಕೊರತೆಗಳನ್ನು ಒಳಗೊಂಡ ಮನವಿ ಪತ್ರವನ್ನು ಸಿರಿಗೆರೆ ಶ್ರೀಗಳಿಗೆ ನೀಡಿದರು. ಈ ಮನವಿ ಪತ್ರವನ್ನು ಸಿರಿಗೆರೆ ಶ್ರೀಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದರು.

ಈ ಮನವಿಗಳನ್ನು ಸ್ವೀಕರಿಸಿದಾಗ ಸಿಎಂ ಕಣ್ಣಂಚಿನಲ್ಲಿ ನೀರು ಕಂಡು ಬಂತು. ನಂತರ ಆ ಮನವಿಗಳನ್ನು ಚಿತ್ರದುರ್ಗ ಜಿಲ್ಲಾಧಿಕಾರಿಗೆ ನೀಡಿ ಸಮಸ್ಯೆ ಬಗೆ ಹರಿಸುವಂತೆ ಸೂಚಿಸಿದರು.

Related posts

ವಿದ್ಯುತ್ ಚಾಲಿತ ವಾಹನಗಳ ನೋಂದಣಿ; ರಾಜ್ಯಕ್ಕೆ ಎಷ್ಟನೇ ಸ್ಥಾನ? ತಿಳ್ಕೋಬೇಕಾದ ಇಂಪಾರ್ಟೆಂಟ್ ವಿಷ್ಯ

eNewsLand Team

ಪೆಟ್ರೋಲ್, ‌ಡೀಸೆಲ್ ಬೆಲೆ ಇಳಿಕೆ, ಇಂದು ಸಂಜೆ ಅಧಿಸೂಚನೆ: ಸಿಎಂ

eNEWS LAND Team

ಭೂಕಂಪ; ತಾಲಿಬಾನ್ ಅಫ್ಘಾನಿಸ್ತಾನ ಸ್ಮಶಾನ, ತುತ್ತು ಅನ್ನಕ್ಕೂ ತತ್ವಾರ!!

eNewsLand Team