34 C
Hubli
ಮಾರ್ಚ್ 23, 2023
eNews Land
ರಾಜ್ಯ

ಆರೋಗ್ಯ ಹಾಗೂ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಮಾಂಡವೀಯ ಭೇಟಿ: ಸಿಎಂ ಬೊಮ್ಮಾಯಿ

Listen to this article

ಇಎನ್ಎಲ್ ಬ್ಯೂರೋ :

ಆರೋಗ್ಯ ಹಾಗೂ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಮಾಂಡವೀಯ ಭೇಟಿ: ಸಿಎಂ ಬೊಮ್ಮಾಯಿ.
ಕೋವಿಡ್ ನಿರ್ವಹಣೆ ಹಾಗೂ ಕೋವಿಡ್ ಹೊಸ ತಳಿಯ ಬಗ್ಗೆ ಕೇಂದ್ರ ಆರೋಗ್ಯ ಸಚಿವರೊಂದಿಗೆ ಚರ್ಚಿಸಲಾಗಿದೆ,

ರಾಜ್ಯದಲ್ಲಿ ಕೋವಿಡ್ ನಿರ್ವಹಣೆ, ಲಸಿಕೆ ಅಭಿಯಾನದ ಬಗ್ಗೆ ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿ ಅದನ್ನು ಮುಂದುವರೆಸಬೇಕೆಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಲಸಿಕೆ ದಾಸ್ತಾನು ಸಾಕಷ್ಟಿದೆ. ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಬಗ್ಗೆ ಕೇಂದ್ರ ಸರ್ಕಾರ ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ದೇಶನ ನೀಡುತ್ತದೆ. ರಾಜ್ಯಕ್ಕೆ ಕೇರಳದಿಂದ ಬರುವ ಪ್ರಯಾಣಿಕರನ್ನು ನಿಯಂತ್ರಣ ಮಾಡಿದಂತೆಯೇ ತಮಿಳುನಾಡಿನಿಂದ ಬರುವ ಪ್ರಯಾಣಿಕರ ಮೇಲೂ ನಿಗಾ ವಹಿಸಲು ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.

ಹೆಚ್ಚುವರಿ ಡಿ ಎ ಪಿ ಗೆ ಮನವಿ

ರಾಜ್ಯಕ್ಕೆ ಹೆಚ್ಚುವರಿ ಡಿಎಪಿಗೆ ಕೇಂದ್ರ ರಸಗೊಬ್ಬರ ಸಚಿವರಿಗೆ ಬೇಡಿಕೆ ಸಲ್ಲಿಸಲಾಗಿದೆ. ಅಕ್ಟೋಬರ್ ಹಾಗೂ ನವೆಂಬರ್ ತಿಂಗಳಲ್ಲಿ ರಾಜ್ಯಕ್ಕೆ ನಿಗದಿಯಾಗಿರುವ ೪೮ ಸಾವಿರ ಮೆ.ಟನ್ ಡಿಎಪಿಯನ್ನು ಸಂಪೂರ್ಣವಾಗಿ ಪೂರೈಸುವ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಕೋರ್ಟು ಮತ್ತು ಕಾನೂನಿನ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಕೇಂದ್ರ ಕಾನೂನು ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್‌ನೊಂದಿಗೆ ಮೈತ್ರಿಯ ಬಗ್ಗೆ ಪ್ರತಿಕ್ರಿಯಿಸಿ, ಕೇಂದ್ರದ ವರಿಷ್ಠರೊಂದಿಗೆ ಸಮಾಲೋಚಿಸಿ ಬಿ.ಎಸ್. ಯಡಿಯೂರಪ್ಪ ಹಾಗೂ ಜೆಡಿಎಸ್ ನಾಯಕರಾದ ಕುಮಾರಸ್ವಾಮಿಯವರು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯಿಂದಾಗಿ ಜಾನುವಾರುಗಳಿಗೆ ಕಾಲು ಬಾಯಿ ರೋಗ ಹೆಚ್ಚಾಗಿದ್ದು, ಲಸಿಕೆಯ ಕೊರತೆ ಇರುವುದನ್ನು ಗಮನಿಸಲಾಗಿದೆ. ಲಸಿಕೆ ಕೊರತೆಯನ್ನು ನೀಗಿಸಿ ಲಸಿಕೆಯನ್ನು ಲಭ್ಯವಾಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಎಸ್.ಆರ್.ವಿಶ್ವನಾಥ್ ಅವರ ಕೊಲೆ ಸಂಚಿನ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದ್ದು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಅಲ್ಲಿರುವ ಮಾಹಿತಿಗಳನ್ನು ಕಲೆಹಾಕಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

Related posts

ಬಿಡಿಎ ಭ್ರಷ್ಟಾಚಾರದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ: ಸಿಎಂ

eNewsLand Team

ರಾಜ್ಯದಲ್ಲಿ ಒಮಿಕ್ರಾನ್ ಕುರಿತು ತಜ್ಞರ ಸಭೆ ನಾಳೆ, ಹೊಸ ಮಾರ್ಗಸೂಚಿ ಜಾರಿಗೆ ಕ್ರಮ: ಬೊಮ್ಮಾಯಿ‌

eNewsLand Team

ಈಶ್ವರಪ್ಪ ವಿವಾದಾತ್ಮಕ ಹೇಳಿಕೆಗೆ ಪ್ರತಿಭಟನೆ

eNEWS LAND Team