23.4 C
Hubli
ಮಾರ್ಚ್ 24, 2023
eNews Land
ರಾಜ್ಯ

ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ

Listen to this article

ಇಎನ್ಎಲ್ ಬೆಂಗಳೂರು, ಡಿ.8 : ಕೋವಿಡ್ ನಿರ್ವಹಣೆ ಹಾಗೂ ಮಾರ್ಗಸೂಚಿಗಳ ಬಗ್ಗೆ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ರಾಜ್ಯದ ಜಿಲ್ಲೆಗಳಲ್ಲಿ ಹಾಗೂ ಕ್ಲಸ್ಟರ್‍ಗಳಲ್ಲಿ ಕೋವಿಡ್‍ನ ಸ್ಥಿತಿಗತಿ ಹಾಗೂ ನಿರ್ವಹಣೆ ಹೊಸ ತಳಿ ಒಮಿಕ್ರಾನ್ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಗಳ ವಿವರ, ವಿವಿಧ ದೇಶಗಳಲ್ಲಿ ಒಮಿಕ್ರಾನ್ ತಳಿ ಹಾಗೂ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆಯಲಾಗಿದೆ ಎಂದು ತಿಳಿಸಿದರು.

2022ರ ಮಾರ್ಚ್‍ವರೆಗೆ ಕೋವಿಡ್ ನಿಯಂತ್ರಣಕ್ಕೆ ಬೇಕಾದ ಹಣಕಾಸಿನ ವಿವರಗಳು ಪಡೆದು 2 ನೇ ಅಲೆಯಲ್ಲಿ ಬಿಬಿಎಂಪಿ, ಕಂದಾಯ,ವೈದ್ಯಕೀಯ, ಆರೋಗ್ಯ ಇಲಾಖೆಗಳು ಆಕ್ಸಿಜನ್ ಘಟಕಗಳು, ಲ್ಯಾಬ್‍ಗಳು ಸೇರಿದಂತೆ ಕೋವಿಡ್ ನಿಯಂತ್ರಣಕ್ಕೆ ತೆಗೆದುಕೊಂಡ ಕ್ರಮಗಳಿಗೆ ಬಾಕಿ ಹಣ ಬಿಡುಗಡೆ ಮಾಡುವ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿಸಿದರು.

Related posts

ಕುಗ್ರಾಮದ ಮಹದೇವಗೆ ರಾಜ್ಯೋತ್ಸವ ಪ್ರಶಸ್ತಿ

eNEWS LAND Team

ಹುಬ್ಬಳ್ಳಿ : ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ‌.

eNEWS LAND Team

ಹಿಜಾಬ್ ವಿವಾದ ತಣ್ಣಗಾಗಿಸಲು ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ

eNewsLand Team