27 C
Hubli
ಮೇ 25, 2024
eNews Land
ರಾಜಕೀಯ ರಾಜ್ಯ

ರಾಷ್ಟ್ರೀಯ ನಾಯಕರ ಪ್ರವಾಸದ ಕುರಿತು ಚರ್ಚೆ: ಸಿಎಂ ಬೊಮ್ಮಾಯಿ

ಇಎನ್ಎಲ್ ಬೆಂಗಳೂರು: ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸಗಳ ಕುರಿತು ಚರ್ಚೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಪಕ್ಷದ ಕಚೇರಿಯಲ್ಲಿ ನಡೆದ ಚುನಾವಣಾ ‌ನಿರ್ವಹಣಾ ಸಮಿತಿ ಸಭೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.
ರಾಷ್ಟ್ರೀಯ ನಾಯಕರುಗಳ ಚುನಾವಣಾ ಪ್ರವಾಸಗಳ ಕುರಿತು ಸಭೆ ನಡೆಸಿದ್ದೇವೆ. ಮುಂದಿನ 20 ದಿನಗಳ ರೂಪುರೇಷೆ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು
ಎಲ್ಲಾ ಅಭ್ಯರ್ಥಿಗಳ ಜೊತೆ ಸಂಪರ್ಕ ಇಟ್ಟುಕೊಂಡಿದ್ದೇವೆ. ಅಭ್ಯರ್ಥಿಗಳ 3ನೇ ಪಟ್ಟಿ ಶೀಘ್ರ ಬಿಡುಗಡೆ ಆಗುತ್ತದೆ ಎಂದರು.
ಶನಿವಾರ ಮಾಜಿ ಸಿಎಂ ಜಗದೀಶ್ ಶೆಟ್ಟರ್ ನಿವಾಸದಲ್ಲಿ ಸಭೆ ನಡೆಯುವ ವಿಚಾರದ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಗದೀಶ್ ಶೆಟ್ಟರ್ ಸಭೆ ಎಲ್ಲಾ ಕೂಡಾ ಗೊತ್ತಿದೆ. ಅಲ್ಲದೇ ನನ್ನ ಹೆಣ ಕೂಡಾ ಬಿಜೆಪಿ ಕಚೇರಿ ಕಡೆ ಹೋಗಲ್ಲ ಎಂಬ ಲಕ್ಷ್ಮಣ ಸವದಿ ಹೇಳಿಕೆ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಸವದಿ ಸ್ವಲ್ಪ ಎಮೋಷನಲ್ ಆಗಿದ್ದಾರೆ ಎಂದು ಹೇಳಿದರು.

Related posts

ಸಿದ್ದರಾಮಯ್ಯ ತಾವು ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ; ಬಿಎಸ್ವೈ

eNEWS LAND Team

ಹಿಂದುಳಿಗ ವರ್ಗಗಳ ರಾಜಕೀಯ ಮೀಸಲಾತಿಗಾಗಿ ಎಲ್ಲ ಕಾನೂನಾತ್ಮಕ ಪ್ರಯತ್ನ : ಮುಖ್ಯಮಂತ್ರಿ ಬೊಮ್ಮಾಯಿ

eNewsLand Team

ಜ.21 ದಾಸೋಹ ದಿನಾಚರಣೆ

eNEWS LAND Team