24 C
Hubli
ಮಾರ್ಚ್ 21, 2023
eNews Land
ರಾಜ್ಯ

ಸರಕಾರಿ ಜಾಗ ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ವಸತಿ ಯೋಜನೆಗಳಿಗಾಗಿ 530 ಎಕರೆ ಜಮೀನು ನೀಡಿಕೆ:ಸಚಿವ ಅಶೋಕ

Listen to this article

ಇಎನ್ಎಲ್ ಬೆಳಗಾವಿ ಸುವರ್ಣ ಸೌಧ:

ವಸತಿ ಯೋಜನೆಗಳಿಗಾಗಿ 530 ಎಕರೆ ಜಾಗವನ್ನು ವಸತಿ ಇಲಾಖೆಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ತಿಳಿಸಿದರು.
ಪರಿಷತ್‍ನಲ್ಲಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಒಟ್ಟು 14,27,195 ಎಕರೆ ಸರಕಾರಿ ಜಮೀನು ಒತ್ತುವರಿಯಾಗಿದ್ದು,ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದೆ. ಅದರಂತೆ ಎಲ್ಲ ಜಿಲ್ಲಾಧಿಕಾರಿಗಳು ಕಾಲಬದ್ಧ ಕ್ರಿಯಾಯೋಜನೆ ಸಿದ್ದಪಡಿಸಿಕೊಂಡಿದ್ದು,ಒತ್ತುವರಿ ಆಗಿರುವ ಸರಕಾರಿ ಜಮೀನುಗಳನ್ನ ತೆರವುಗೊಳಿಸಲು ಕ್ರಮವಹಿಸುತ್ತಿದ್ದಾರೆ ಎಂದು ವಿವರಿಸಿದ ಅವರು ಸರಕಾರಿ ಜಾಗ ಒತ್ತುವರಿ ಮಾಡಿಕೊಂಡವರ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ;ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ರಾಜ್ಯದಲ್ಲಿ 1939672-21.09 ಎಕರೆ/ಗುಂಟೆ ಗೋಮಾಳ ಜಮೀನು ಇರುವುದನ್ನು ಸದನಕ್ಕೆ ತಿಳಿಸಿದರು.

Related posts

ನೈರುತ್ಯ ರೈಲ್ವೆ ಆಸ್ಪತ್ರೆಗಳಲ್ಲಿ  ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯ ಅನುಷ್ಠಾನ

eNEWS LAND Team

100 ದಿನಗಳ ಆಡಳಿತದಲ್ಲಿ ದಿಟ್ಟ ಹೆಜ್ಜೆ ಸಿಎಂ

eNEWS LAND Team

ಜೋಗದ ವೈಭವದ ದೃಶ್ಯ ಕಣ್ತುಂಬಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್

eNewsLand Team