35 C
Hubli
ಮಾರ್ಚ್ 29, 2024
eNews Land
ರಾಜ್ಯ

ಅಂತಾರಾಷ್ಟ್ರೀಯ ಮಟ್ಟಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಣ ಮೇಲ್ದರ್ಜೆಗೆ : ಕೇಂದ್ರ ಸಚಿವ ಜೋಶಿ

ಇಎನ್ಎಲ್ ಹುಬ್ಬಳ್ಳಿ

ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಂತೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ಸೇರಿದಂತೆ ಇತರ ಸಂಬಂಧಿಸಿದ ಸೌಲಭ್ಯಗಳ ನ್ನು ಮೇಲ್ದರ್ಜೆಗೇರಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಉನ್ನತೀಕರಿಸಲಾಗುವುದು ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿಯವರು ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಟ್ಟಕ್ಕೇರಿಸುವ ಕಾರ್ಯ ಸರಕಾರದ ತೀವ್ರ ಪರಿಶೀಲನೆಯಲ್ಲಿದೆಯೆಂದು ಹೇಳಿರುವ ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ಹುಬ್ಬಳ್ಳಿ-ಧಾರವಾಡ ರಾಜ್ಯದ 2ನೇ ಅತೀದೊಡ್ಡ ನಗರವಾಗಿರುವ ಹಾಗೂ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಬಾರತೀಯ ತಾಂತ್ರಿಕ ಸಂಸ್ಥೆ (IIIT) ಹಾಗೂ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಗಲಂತಹ ಬೃಹತ್ ಸಂಸ್ಥೆಗಳ ಕಾಯಾರಂಭ ಹಾಗೂ ಹೆಚ್ಚುತ್ತಿರುವ ವಿಮಾನ ಪ್ರಯಾಣಿಕರ ಸಂಖ್ಯೆಯ ಹಿನ್ನೆಲೆಯಲ್ಲಿ ಈಗಿರುವ ಟರ್ಮಿನಲ್ ಕಟ್ಟಡದ ವಿಸ್ತೀರ್ಣ ಹೆಚ್ಚಳ ಮಾಡಿ ಬೆಂಗಳೂರಿನಲ್ಲಿರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿರುವ ವಿಮಾನ ಆಗಮನ – ನಿರ್ಗಮನ ವ್ಯವಸ್ಥೆ ಮಾಡಲು ಮತ್ತೊಂದು ಹೊಸ ಟರ್ಮಿನಲ್ ನಿರ್ಮಾಣ ಮಾಡಲು ಯೋಜಿಸಲಾಗಿದೆಯೆಂದು ಸಚಿವ ಜೋಶಿಯವರು ತಿಳಿಸಿದ್ದಾರೆ.
ಈ ಎಲ್ಲ ಕಾರ್ಯ ಕೈಗೂಡಲು ಕೇಂದ್ರ ವಿಮಾನಯಾನ ಸಚಿವ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪತ್ರವನ್ನು ಬರೆದು ಒತ್ತಾಯಿಸಿದ್ದಾರೆ.

ರನ್‌ವೇ ವಿಸ್ತೀರ್ಣ ಅಪ್ರಾನ್ ವಿಸ್ಥೀರ್ಣ ಹಾಗೂ ಕಾರ್ಗೋ ನಿರ್ವಹಣಾ ಸುಧಾರಣೆ ಮುಂತಾದ ಕಾರ್ಯಗಳನ್ನು ಕೈಗೊಳ್ಳಲು ಕೇಂದ್ರ ನಾಗರೀಕ ವಿಮಾನಯಾನ ಸಚಿವ ಶ್ರೀ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಕಳೆದ ತಿಂಗಳಷ್ಟೇ ಬರೆದ ಪತ್ರಕ್ಕೆ ಉತ್ತರವಾಗಿ ವಿಮಾನಯಾನ ಸಚಿವರೂ ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿರುವ ಜೋಶಿ
ಕೈಗಾರಿಕಾ ಹೂಡಿಕೆ ಮಾತ್ರವಲ್ಲದೆ, ಕೃಷಿ, ತೋಟಗಾರಿಕೆ ಉತ್ಪನ್ನಗಳ ರಫ್ತು ಚಟುವಟಿಕೆ, ಉನ್ನತ ಶಿಕ್ಷಣದ ಅವಕಾಶಗಳ ವಿಸ್ತರಣೆ ಹಾಗೂ ಮತ್ತಿತರ ಅಭಿವೃದ್ಧಿ ದೃಷ್ಟಿಯಿಂದಲೂ ಉತ್ತರ ಕರ್ನಾಟಕ ಭಾಗದಲ್ಲಿ ಅದರಲ್ಲೂ ಈಗಿರುವ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಪರಿವರ್ತಿಸುವ ಅಗತ್ಯವನ್ನು ಜೋಶಿಯವರು ವಿಮಾನ ಯಾನ ಸಚಿವರೊಂದಿಗೆ ಪ್ರತಿಪಾದಿಸಿದ್ದಾರೆ.

ಈ ಎಲ್ಲ ಉದ್ದೇಶಗಳಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣ ವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವುದು ಸೂಕ್ತ ಎಂದು ಜೋಶಿಯವರು ಒತ್ತಾಯಿಸಿದ್ದಾರೆ

ಹುಬ್ಬಳ್ಳಿ ವಿಮಾನನಿಲ್ದಾಣದ ಮೇಲಿನ ಎಲ್ಲಾ ಸುಧಾರಣಾ ಕಾರ್ಯದ ಪ್ರಸ್ತಾವನೆ ತೀವ್ರ ಪರಿಶೀಲನೆಯಲ್ಲಿರುವ ಬಗ್ಗೆ ಪ್ರತಿಕ್ರಯಿಸಿದ್ದಾರೆಂದು ಸಚಿವ ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ಈಗಿನ ೩೬೦೦ ಚೌರಸ್ ಮೀಟರ್ ಗಾತ್ರದ ಟರ್ಮಿನಲ್ ಕಟ್ಟಡ ಈಗ ಹಾಲಿ ಪ್ರತಿ ವರ್ಷ ೫ಲಕ್ಷ ಪ್ರಯಾಣಿಕರ ನಿರ್ವಹಣೆಯ ಒಂದೇ ಸಮಯಕ್ಕೆ ೩೦೦ ಪ್ರಯಾಣಿಕರಂತೆ ಸಾಮರ್ಥ್ಯ ಹೊಂದಿದ್ದು, ಇದರೊಂದಿಗೆ ಇಪ್ಪತ್ತು ಸಾವಿರ ಚೌರಸ ಮೀಟರ್ ಗಾತ್ರದ ೧೪೦೦ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯದ ೩ ಏರೋಬ್ರಿಜ್ ಸೇರಿದಂತೆ ಎಲ್ಲಾ ಆಧುನಿಕ ಸೌಲಭ್ಯಗಳೊಂದಿಗೆ ಪರಿವರ್ತಿಸುವ ಯೋಜನೆ, ಈಗಿನ ೨೬೦೦ಘಿ೪೫ ಮಿ. ಗಾತ್ರದ ರನ್ ವೇ ಹೆಚ್ಚಳ ಹಾಗೂ ಈಗಿರುವ ಅಪ್ರಾನ್ ಗಾತ್ರದ ಹೆಚ್ಚಳ ಸೇರಿದಂತೆ ಸಮಗ್ರವಾಗಿ ನಿಲ್ದಾಣದ ಅಭಿವೃದ್ಧಿ ಮಾಡಲಾಗುವುದೆಂದು ಶ್ರೀ ಜೋಶಿ ವಿವರಿಸಿದ್ದಾರೆ. ಈ ಎಲ್ಲಾ ಸುಧಾರಣಾ ಕಾರ್ಯಗಳು ಮುಗಿದಾಗ ಹುಬ್ಬಳ್ಳಿ ವಿಮಾನ ನಿಲ್ದಾಣ ಅವಳಿ ನಗರದ ಹೆಮ್ಮೆಯಾಗುವುದರಲ್ಲಿ ಸಂದೇಹವಿಲ್ಲವೆAದು ಕೂಡಾ ಸಂತೋಷ ವ್ಯಕ್ತಪಡಿಸಿದ್ದಾರೆ. ಹಾಗೂ ಈ ಸುಧಾರಣಾ ಪ್ರಸ್ತಾವನೆಗೆ ಬೇಗನೇ ಅನುಮತಿ ನೀಡಿ ಬೇಗನೇ ಕಾರ್ಯ ಆರಂಭವಾಗುವಂತೆ ವಿಮಾನಯಾನ ಸಚಿವರೊಂದಿಗೆ ನಿರಂತರ ಸಂಪರ್ಕದಲ್ಲಿರುವದಾಗಿ ಕೂಡಾ ತಿಳಿಸಿದ್ದಾರೆ

ರಾಜ್ಯದಲ್ಲಿಯೇ ಅತೀ ವೇಗವಾಗಿ ಬೆಳೆಯುತ್ತಿರುವ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇವಲ 3-4 ವರ್ಷಗಳಲ್ಲಿ ಮೂರ್ನಾಲ್ಕು ಪಟ್ಟು ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದು ಈ ಕಾರ್ಯ ಅನುಮೋಡನೆಗೆ ಒತ್ತಾಯಿಸಿದ್ದಾರೆ.

 

ಇದು ಸಾಧ್ಯವಾದರೆ ಸಹಜವಾಗಿಯೇ ಕೃಷಿ ಮತ್ತು ಕೈಗಾರಿಕೆ ಕ್ಷೇತ್ರಗಳಲ್ಲಿ ಬಂಡವಾಳ ಹೂಡುವವರು ಇನ್ನಷ್ಟು ಆಸಕ್ತಿ ತಳೆಯು ತ್ತಾರೆ. ಆ ಮೂಲಕ ರಾಜಧಾನಿ ಬೆಂಗಳೂರಿನ ಮೇಲೆ ಕೇಂದ್ರೀ ಕೃತವಾಗಿರುವ ಗಮನ ಉತ್ತರ ಕರ್ನಾಟಕದ ಹೆಬ್ಬಾಗಿಲೆಂದೇ ಖ್ಯಾತಿ ಹೊಂದಿರುವ ಹುಬ್ಬಳ್ಳಿ ನಗರದ ಮೇಲೆ ಬೀಳುತ್ತದೆ. ಅಲ್ಲದೆ ಉದ್ದಿಮೆದಾರರು ಬಂಡವಾಳ ಹೂಡಲು ಆಸಕ್ತಿ ತೋರುತ್ತಾರೆ. ಇದರಿಂದ ಆ ಪ್ರದೇಶ ಆರ್ಥಿಕ ಬೆಳವಣ ಗೆಗೆ ಸಹ ಕಾರಿಯಾಗುವುದಲ್ಲದೆ, ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ ಎಂದು ಸಚಿವ ಜೋಶಿಯವರು ತಿಳಿಸಿದ್ದಾರೆ.

Related posts

ಬೂತ್ ವಿಜಯ ಅಭಿಯಾನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

eNewsLand Team

ಜೋಗದ ವೈಭವದ ದೃಶ್ಯ ಕಣ್ತುಂಬಿಕೊಂಡ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್

eNewsLand Team

ಪ್ರಧಾನಿ ಮೋದಿಯಿಂದ ಸಿಎಂ ಬೊಮ್ಮಾಯಿಗೆ ಕರೆ

eNewsLand Team