ರಾಜ್ಯಪಾಲರ ಪ್ರವಾಸ
ಇಎನ್ಎಲ್
ಹುಬ್ಬಳ್ಳಿ:
ರಾಜ್ಯದ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಅ.18 ಸೋಮವಾರ ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ಅ.18ರ ಬೆಳಿಗ್ಗೆ 8.40 ಕ್ಕೆ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸುವರು. ಬೆಳಿಗ್ಗೆ 11 ಕ್ಕೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ 34 ನೇ ಘಟಿಕೋತ್ಸವದಲ್ಲಿ ಭಾಗವಹಿಸುವರು. ಮಧ್ಯಾಹ್ನ 3.05 ಕ್ಕೆ ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೊಂದಿಗೆ ಸಂವಾದ ನಡೆಸುವರು.ರಾತ್ರಿ 8.35 ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.