34 C
Hubli
ಮಾರ್ಚ್ 23, 2023
eNews Land
ರಾಜ್ಯ

ಬೆಳಗಾವಿಯಲ್ಲಿ ಪುಂಡಾಟಿಕೆ ಘಟನೆ ಖಂಡಿಸಿದ ಮುಖ್ಯ ಮಂತ್ರಿ ಬೊಮ್ಮಾಯಿ‌

Listen to this article

ಇಎನ್ಎಲ್ ಧಾರವಾಡ

ಬೆಳಗಾವಿಯಲ್ಲಿ ನಿನ್ನೆ ರಾತ್ರಿ ನಡೆದ ಪುಂಡಾಟಿಕೆಯನ್ನು ಖಂಡಿಸುತ್ತೇನೆ. ಆ ಪುಂಡರನ್ನು ಸೆದೆ ಬಡಿಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಗೃಹ ಸಚಿವರಿಗೆ ಸೂಚಿಸಿದ್ದೇನೆ. ಅವರೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಕಲ್ಲು ತೂರಾಟ ಮಾಡುವುದು , ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾಗೂ ಸರ್ಕಾರಿ ವಾಹನಗಳಿಗೆ ಹಾನಿ ಉಂಟುಮಾಡುವುದು ಕಾನೂನು ಬಾಹಿರ. ಇಂಥ ಘಟನೆ ಪುನಃ ಜರುಗದಂತೆ ಇನ್ನಷ್ಟು ಕಠಿಣ ಹಾಗೂ ದೀರ್ಘಾವಧಿ ಕ್ರಮಗಳನ್ನು ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಈ ಪ್ರವೃತ್ತಿ ಸರಿಯಲ್ಲ ಎಂದರು.

ರಾಷ್ಟ್ರಭಕ್ತರ ಪ್ರತಿಮೆ ಭಗ್ನಗೊಳಿಸುವುದು ದೇಶಭಕ್ತರ ಕೆಲಸವಲ್ಲ. ದೇಶಭಕ್ತರು ಎಲ್ಲಾ ಸಮುದಾಯಕ್ಕೆ ಸೇರಿದವರು. ದೇಶಕ್ಕಾಗಿ ತ್ಯಾಗ ಮಾಡಿದವರು. ಪ್ರತಿಮೆ ಸ್ಥಾಪಿಸುವುದು ಅವರನ್ನು ಗೌರವಿಸಬೇಕೆಂದೇ ವಿನಃ ಅವರ ಮುಖಾಂತರ ಸಮಾಜದಲ್ಲಿ ಕ್ಷೋಭೇ ಉಂಟುಮಾಡುವುದಲ್ಲ. ಈ ವರ್ತನೆ ಎಳ್ಳಷ್ಟೂ ಸರಿಯಲ್ಲ. ಕೆಲವು ಪುಂಡರು ಈ ರೀತಿ ಮಾಡುತ್ತಿದ್ದು ಅವರನ್ನು ಸದೆ ಬಡಿಯಲಾವುದು. ಇದು ಉದ್ದೇಶಪೂರ್ವಕವೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

Related posts

ರಾಜ್ಯದ ಯಶೋಗಾಥೆಯಲ್ಲಿ ಭಾಗಿಯಾಗಿ: ಹೂಡಿಕೆದಾರರಿಗೆ ಮುಖ್ಯಮಂತ್ರಿ ಆಹ್ವಾನ

eNewsLand Team

ಸಾರಿಗೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆ ಭರ್ತಿ ಪರಿಶೀಲನೆ

eNEWS LAND Team

ಗುತ್ತಿಗೆ ಕಾಮಗಾರಿಗಳಲ್ಲಿ 50ಲಕ್ಷ ರೂ.ಮೀಸಲಾತಿ ಸಮರ್ಪಕ ಜಾರಿ:ಸಚಿವ ಸಿ.ಸಿ.ಪಾಟೀಲ್

eNEWS LAND Team