29 C
Hubli
ಅಕ್ಟೋಬರ್ 8, 2024
eNews Land
ರಾಜ್ಯ

ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಸಚಿವ ಪ್ರಭು ಚವ್ಹಾಣ್

ಇಎನ್ಎಲ್ ಹುಬ್ಬಳ್ಳಿ ಡಿ. 19 :

1964ರಲ್ಲಿಯೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿತ್ತು. ಆದಾಗ್ಯೂ ದೇಶದಲ್ಲಿ ವರ್ಷದಿಂದ ವರ್ಷಕ್ಕೆ ಗೋಸಂತತಿ ಕಡಿಮೆಯಾಗುತ್ತಲೇ ನಡೆದಿತ್ತು. ಗೋವುಗಳ ಬಗ್ಗೆ ಎಳ್ಳಷ್ಟೂ ಕಾಳಜಿ ಇಲ್ಲದೆ ಸರ್ಕಾರಗಳು,ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿದ್ದವು ಎಂದು ಸಚಿವರು ಹೇಳಿದರು.

ಅತಿಹೆಚ್ಚು ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿದ್ದವು.

ಈಗ ವಿರೋಧ ಪಕ್ಷಗಳು ರಾಜ್ಯದಲ್ಲಿ ಜಾರಿಯಾಗಿರುವ ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಒತ್ತಾಯ ಮಾಡುತ್ತಿದೆ. ಯಾವ ನೈತಿಕತೆ ಇಟ್ಟುಕೊಂಡು ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು ಆಗ್ರಹಿಸುತ್ತಿದೆ ಎಂದು ಪ್ರಭು ಚವ್ಹಾಣ್ ಪತ್ರಕರ್ತರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.

ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಇಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಗೋ ಪೂಜೆ ಸಲ್ಲಿಸಿ ಮಾತನಾಡಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿ ಮಾಡುವ ಮೊದಲು ಬೇರೆ ಬೇರೆ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಅಧ್ಯಯನ ನಡೆಸಿ ಕರ್ನಾಟಕದಲ್ಲಿ ಕಾಯ್ದೆಯ ಅನುಷ್ಠಾನ ಮಾಡಲಾಗಿದೆ ದಿನಂಪ್ರತಿ ಅವ್ಯಾಹತವಾಗಿ ಗೋವುಗಳ ಮಾರಣಹೋಮ ನಡೆಯುವುದಕ್ಕೆ ಈಗ ಕಡಿವಾಣ ಬಿದ್ದಿದೆ.

ಗೋ ಸಂಕುಲದ ಬಗ್ಗೆ ಗೋ ಪರಂಪರೆಯ ಬಗ್ಗೆ ಗೋವುಗಳ ಬಗ್ಗೆ ಕಾಳಜಿ ವಿರೋಧ ಪಕ್ಷಗಳಿಗೆ ಕಾಳಜಿ ಇಲ್ಲ. ಗೋವುಗಳ ಸಂತತಿ ಉಳಿಸುವ ನಿರೀಕ್ಷೆ ಅವರಿಂದ ಮಾಡಲಾಗುವುದಿಲ್ಲ ಎಂದು ಸಚಿವ ಪ್ರಭು ಚೌಹಾಣ್ ಕಟುವಾಗಿ ಮಾತನಾಡಿದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ನಂತರ 10 ಸಾವಿರ ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ರಕ್ಷಣೆ ಮಾಡಿ ಸ್ಥಳೀಯ ಶಾಲೆಗಳಿಗೆ ನೀಡಲಾಗಿದೆ. ಅಕ್ರಮ ಕಸಾಯಿ ಖಾನೆಯನ್ನು ಸಹ ದೂರುಗಳ ಆಧಾರದ ಮೇಲೆ ಬಂದ್ ಮಾಡಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದರು.

ಕಸಾಯಿಖಾನೆ ಹಾಗೂ ಗೋಹತ್ಯೆ ವಿಚಾರದಲ್ಲಿ ಅನೇಕ ಜನರು ಕೋರ್ಟ್ ಮೊರೆ ಹೋಗಿದ್ದಾರೆ ಇನ್ನು ಕೆಲವೇ ದಿನಗಳಲ್ಲಿ ತೀರ್ಪು ಬರಲಿದೆ. ಕೋರ್ಟಿನ ತೀರ್ಪು ಬಂದ ನಂತರ ರಾಜ್ಯದಲ್ಲಿ ಹಿಂದೆಂದಿಗಿಂತಲೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹೆಚ್ಚು ಕಠಿಣವಾಗಿ ಜಾರಿಗೊಳಿಸಲಾಗುವುದು. ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರತಿಯೊಂದು ಕಸಾಯಿಖಾನೆಗಳನ್ನು ಮುಲಾಜಿಲ್ಲದೆ ಬಂದ್ ಮಾಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯಾದ್ಯಂತ ಗೋಮಾಳಗಳನ್ನು ಗುರುತಿಸಿ ಒತ್ತುವರಿಯಾಗಿರುವ ಗೋಮಾಳಗಳನ್ನು ಪಡೆದುಕೊಂಡು ಐವತ್ತರಿಂದ ನೂರು ಎಕರೆ ಪ್ರದೇಶದಲ್ಲಿ ಗೋಶಾಲೆ ನಿರ್ಮಿಸಲು ರಾಜ್ಯಾದ್ಯಂತ ಕ್ರಮ ವಹಿಸಲಾಗುತ್ತದೆ ಎಂದು ಸಚಿವರು ನುಡಿದರು.

ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸ್ಥಳ ಗುರುತಿಸುವ ಕಾರ್ಯ ಸಂಪೂರ್ಣವಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಗೋಶಾಲೆಗಳನ್ನು ಆರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

Related posts

ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು; ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

eNewsLand Team

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಸಿಎಂ ಬೊಮ್ಮಾಯಿ ಮನವಿ

eNewsLand Team

ನೈಋತ್ಯ ರೈಲುಗಳ ಸೇವೆ ರದ್ದತಿ

eNEWS LAND Team