27 C
Hubli
ಡಿಸೆಂಬರ್ 7, 2023
eNews Land
ರಾಜ್ಯ ಸಂಸ್ಕೃತಿ

ರಾಜ್ಯೋತ್ಸವ ಪ್ರಶಸ್ತಿಗೆ 6ಸಾವಿರಕ್ಕೂ ಹೆಚ್ಚು ಅರ್ಜಿ

 

 

ಇಎನ್ ಎಲ್:
ಬೆಂಗಳೂರು : ರಾಜ್ಯೋತ್ಸವ ಪ್ರಶಸ್ತಿಗಾಗಿ ಕಳೆದ ಮೂರು ವರ್ಷಗಳ ಪೈಕಿ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಜನರ ಸ್ಪಂದನೆ ಹೆಚ್ಚಾಗಿದೆ. ಪ್ರಸಕ್ತ ಸಾಲಿನ 66ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 6210 ಅರ್ಜಿಗಳು ಇಲಾಖೆಗೆ ಬಂದಿವೆ.
ರಾಜ್ಯದಲ್ಲಿ ಮೊದಲ ಬಾರಿ ಆನ್ ಲೈನ್ ಮೂಲಕ ರಾಜ್ಯೋತ್ಸವ ಪ್ರಶಸ್ತಿಗಾಗಿ ಸಾರ್ವಜನಿಕರೇ ಶಿಫಾರಸ್ಸು ಮಾಡಲು ಅವಕಾಶ ನೀಡಲಾಗಿತ್ತು. “ಸೇವಾ ಸಿಂಧು” ಮೂಲಕ ಎಲೆಮರೆಯ ಸಾಧಕರನ್ನು ಸಾರ್ವಜನಿಕರು ಗುರುತಿಸುವ ಅವಕಾಶ ಮಾಡಿ ಕೊಡಲಾಗಿತ್ತು. ಈ ಪ್ರಕ್ರಿಯೆಗೆ ನಾಡಿನ ಜನರು ಬೆಂಬಲ ವ್ಯಕ್ತ ಪಡಿಸಿದ್ದಾರೆ.
ಅವುಗಳಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೇಂದ್ರ ಕಚೇರಿಗೆ ಭೌತಿಕ 1450 ಅರ್ಜಿಗಳು ಹಾಗೂ `ಸೇವಾ ಸಿಂಧು’ ಮೂಲಕ 4770 ಹೆಸರುಗಳು ಬಂದಿದ್ದು ಅವುಗಳನ್ನು 28,857 ಜನರು ಆನ್ಲೈನ್ ಮೂಲಕ ಶಿಫಾರಸ್ಸು ಮಾಡಿದ್ದಾರೆ. ಶಿಕ್ಷಣ, ಸಾಹಿತ್ಯ, ಸಂಗೀತ, ಕಲೆ, ನಾಟಕ, ಕ್ರೀಡೆ, ಕೃಷಿ, ವಿಜ್ಞಾನ-ತಂತ್ರಜ್ಞಾನ ಸೇರಿದಂತೆ 26 ಕ್ಷೇತ್ರಗಳಲ್ಲಿ ಸಾಧಕರ ಅರ್ಜಿಗಳು ಬಂದಿವೆ.
2020-21ನೇ ಸಾಲಿನ 65ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 1144 ಅರ್ಜಿಗಳು ಬಂದಿದ್ದವು. 2019-20ನೇ ಸಾಲಿನ 64ನೇ ರಾಜ್ಯೋತ್ಸವ ಪ್ರಶಸ್ತಿಗಾಗಿ 1191 ಅರ್ಜಿಗಳು ಹಾಗೂ 2018-19ನೇ ಸಾಲಿನ 63ನೇ ರಾಜ್ಯೋತ್ಸವ ಪ್ರಶಸ್ತಿಗೆ 1300 ಅರ್ಜಿಗಳು ಬಂದಿದ್ದವು.
ಅದರಂತೆ ಆನ್ಲೈನ್ ವ್ಯವಸ್ಥೆ ಮಾಡಿರುವುದರಿಂದ ಆಯ್ಕೆ ಪ್ರಕ್ರಿಯೆಯಲ್ಲಿ ಜನರು ನೇರವಾಗಿ ಭಾಗಿಯಾಗಿದ್ದು ರಾಜ್ಯೋತ್ಸವ ಪ್ರಶಸ್ತಿಗೆ ಹೆಚ್ಚಿನ ಗೌರವ ತಂದಿದೆ. ಜೊತೆಗೆ ಈ ಬಾರಿಯ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರುವುದು ಜನರ ಮೆಚ್ಚುಗೆಗೆ ಕಾರಣವಾಗಿದೆ. ಕಳೆದ ಮೂರು ವರ್ಷಗಳ ಅಂಕಿಸಂಖ್ಯೆಗಳನ್ನು ಗಮನಿಸಿದಾಗ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಜನರು ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರು ಸ್ಪಂದಿಸಿದ್ದು ಕಂಡುಬಂದಿದೆ. ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಮ್ಮಳಿಸಿ ಬಂದ ದುಃಖ ತಡೆದು ಮಾತನಾಡಿದ ಸಿಎಂ; ಯಾಕೆ ಗೊತ್ತಾ? ಇದು ದೇಶದ ವಿಷ್ಯ!!

eNewsLand Team

ಬಿಟ್ ಕಾಯಿನ್ ಹಗರಣದ ಬಗ್ಗೆ ದಾಖಲೆಗಳಿದ್ದರೆ ತನಿಖಾ ಸಂಸ್ಥೆಗಳಿಗೆ ನೀಡಿ- ಸಿಎಂ ಬೊಮ್ಮಾಯಿ

eNEWS LAND Team

ಹುಬ್ಬಳ್ಳಿಯಲ್ಲಿ ನೆನಪಿರಲಿ ಖ್ಯಾತಿಯ ನಟ ಪ್ರೇಮ್ ಹೇಳಿಕೆ ಏನು?

eNEWS LAND Team