23 C
Hubli
ಸೆಪ್ಟೆಂಬರ್ 25, 2023
eNews Land
ರಾಜ್ಯ

ಹಿಜಾಬ್ ವಿವಾದ ತಣ್ಣಗಾಗಿಸಲು ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ

ಇಎನ್ಎಲ್ ಬೆಂಗಳೂರು: ರಾಜ್ಯದ15ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಹಬ್ಬಿರುವ ಹಿಜಾಬ್ ವಿವಾದವನ್ನು ತಣ್ಣಗಾಗಿಸುವ ಪ್ರಯತ್ನವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಮೂತು ದಿನಗಳ ಕಾಲ ರಜೆ ಘೋಷಿಸಿದ್ದಾರೆ.

 

ನವದೆಹಲಿಯಲ್ಲಿರುವ ಸಿಎಂ ಬೊಮ್ಮಾಯಿ, ಈ ಬಗ್ಗೆ ಆದೇಶ ಮಾಡಿದ್ದು, ಮೂರು ದಿನಗಳ ಕಾಲ ಹೈಸ್ಕೂಲು-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ರಾಜ್ಯದಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿರುವ ಅವರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಎಲ್ಲರೂ ಸಹಕರಿಸಿ ರಾಜ್ಯದಲ್ಲಿ ಶಾಂತಿ ನೆಲಸಲು ಕೈ ಜೋಡಿಸಬೇಕು ಎಂದು ಟ್ವಿಟರ್ ಮೂಲಕ ಕೇಳಿಕೊಂಡಿದ್ದಾರೆ‌.

Related posts

ಸಿದ್ದು ಹೇಳಿಕೆಗೆ ಸಿಎಂ ಸವಾಲು; ಎಲ್ಲಿದೆ 2400 ಕೋಟಿ?

eNEWS LAND Team

ರಾಷ್ಟ್ರೀಯ ನಾಯಕರ ಪ್ರವಾಸದ ಕುರಿತು ಚರ್ಚೆ: ಸಿಎಂ ಬೊಮ್ಮಾಯಿ

eNEWS LAND Team

ರಾಜ್ಯೋತ್ಸವ ಪ್ರಶಸ್ತಿಗೆ 6ಸಾವಿರಕ್ಕೂ ಹೆಚ್ಚು ಅರ್ಜಿ

eNEWS LAND Team