26 C
Hubli
ಏಪ್ರಿಲ್ 28, 2024
eNews Land
ರಾಜ್ಯ ಸುದ್ದಿ

ಜಗದೀಶ್ ಶೆಟ್ಟರ್ ರಾಜೀನಾಮೆ ನೋವು ತಂದಿದೆ: ಸಿಎಂ ಬೊಮ್ಮಾಯಿ

ಇದನ್ನು ಓದಿ:ಬಿಜೆಪಿಯಿಂದ ಶೆಟ್ಟರ್ ಔಟ್ ಆರ್ ಇನ್; ಇಂದು‌ ಸಂಜೆ ಫೈನಲ್, ಲಿಂಗಾಯತ ನಾಯಕಗೆ ಇದೆಂಥಾ ಅವಮಾನ ?

ಇಎನ್ಎಲ್ ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀದಿರುವುದು ನೋವು ಹಾಗೂ ಕಸಿವಿಸಿ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಇದನ್ನು ಓದಿ:ಜನರ ಅಭೂತಪೂರ್ವ ಬೆಂಬಲ ಸಿಕ್ಕಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ

ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ಹಾಗೂ ಪ್ರಮುಖ ನಾಯಕರು.ಪಕ್ಷವು ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದೆ. ನಾನು ಅವರ ವಿರುದ್ದ ಸ್ಪರ್ಧೆ ಮಾಡಿದ್ದೆ. ಮೋದಿ ನೇತೃತ್ವದಲ್ಲಿ ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಕೆ.ಎಸ್. ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಶೆಟ್ಟರ್ ಅವರಿಗೆ ದೆಹಲಿ ಮಟ್ಟದಲ್ಲಿ ಇದಕ್ಕಿಂತ ದೊಡ್ಡ ಹುದ್ದೆ ಕೊಡಲಾಗುವುದು ಎಂದು . ಜೆ.ಪಿ.ನಡ್ಡಾ, ಅಮಿತ್ ಶಾ ಅವರು ತಿಳಿಸಿದ್ದರು.

ಇದನ್ನು ಓದಿ:ಚುನಾವಣಾ ಅಕ್ರಮ ತಡೆಯಲು ಸಾರ್ವಜನಿಕರು ‘ಸಿ-ವಿಜಿಲ್’ ಆ್ಯಪ್ ನ್ನು  ಸದ್ಬಳಕೆ ಮಾಡಿಕೊಳ್ಳಲಿ: ಡಿಸಿ ಗುರುದತ್ತ ಹೆಗಡೆ

ಪಕ್ಷದಲ್ಲಿ ಇರಬೇಕಿತ್ತು
ನಿನ್ನೆಯೂ ಚರ್ಚೆ ಮಾಡಿ, ಅವರು ಹೇಳಿರೋರಿಗೆ ಟಿಕೆಟ್ ಕೊಡಲಾಗುವುದು ಎಂದು ತಿಳಿಸಲಾಯಿತು. ಜಗದೀಶ್ ಶೆಟ್ಟರ್ ಅವರು ಮುಂದುವರಿಸಿಕೊಂಡು ಹೋಗಿದ್ದರೆ ಉತ್ತಮವಾಗಿತ್ತು ಎಂದರು.

ಇದನ್ನು ಓದಿ:2 ದಿನಗಳಲ್ಲಿ ಗೊಂದಲ ಬಗೆಹರಿಯಲಿದೆ: ಸಿಎಂ ಬೊಮ್ಮಾಯಿ

ಯಡಿಯೂರಪ್ಪ ಆದರ್ಶಪ್ರಾಯರು
ಯಡಿಯೂರಪ್ಪ ನಮಗೆ ಆದರ್ಶರು, ಮುಖ್ಯಮಂತ್ರಿ ಇರೋವಾಗಲೇ ರಾಜಿನಾಮೆ ಕೊಟ್ಟಿದ್ದಾರೆ.
ನಮಗೆಲ್ಲ ಪಕ್ಷದ ಆದರ್ಶ ಹೇಳಿಕೊಟ್ಟವರು.
ಭಾರತೀಯ ಜನತಾ ಪಕ್ಷ ಎಲ್ಲ ಸಮುದಾಯವನ್ನು ಒಟ್ಟಿಗೆ ಕರೆದುಕೊಂಡು ಹೋಗೋ ಪ್ರಯತ್ನ ನಡೆಸಿದೆ. ಕಲ್ಯಾಣ ಕರ್ನಾಟಕ, ಕಿತ್ತೂರ ಕರ್ನಾಟಕ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ.
ಯಡಿಯೂರಪ್ಪ ನೇತೃತ್ವದಲ್ಲಿ ಮೊದಲನೇ ಪೀಳಿಗೆ ಬೆಳದು ನಿಂತಿದೆ.
ಎರಡನೆ ಪೀಳಿಗೆಯಲ್ಲಿ ಲಿಂಗಾಯತ ಸಮುದಾಯದ ಸಿ.ಸಿ ಪಾಟೀಲ್, ನಿರಾಣಿ, ಸೋಮಣ್ಣ ಬೆಳೆದು ನಿಂತಿದ್ದಾರೆ. ಲಿಂಗಾಯತ ಸಮುದಾಯಕ್ಕೆ ಅತೀ ಹೆಚ್ಚು ಸ್ಥಾನ ,ಅತೀ ಹೆಚ್ಚು ಮಂತ್ರಿ ಸ್ಥಾನ, ನೀಡಿದ್ದು ಬಿಜೆಪಿ ಎಂದರು.

ಇದನ್ನು ಓದಿ:ಬಿಜೆಪಿ ತೊರೆದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳಲ್ಲ – ಅರುಣ್ ಸಿಂಗ್

ಚುನಾವಣೆ ತಂತ್ರ
ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಇಬ್ಬರಿದ್ದಾರೆ. ಜೆಡಿಎಸ್ ನಲ್ಲಿ ಕುಮಾರಸ್ವಾಮಿ ಹೆಸರು ಇದೆ. ನಮ್ಮ ಚುನಾವಣೆ ತಂತ್ರ ನಾವು ರೂಪಿಸುತ್ತೇವೆ. ಪಕ್ಷ ಗೆಲ್ಲಲಿದೆ ಎಂದು ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನು ಓದಿ:ಮೊದಲ ಪಟ್ಟಿಯಲ್ಲೇ ಬಿಜೆಪಿಗೆ ಮ್ಯಾಜಿಕ್ ನಂಬರ್: ತೇಜಸ್ವಿ ಸೂರ್ಯ

ವರಿಷ್ಠರ ತೀರ್ಮಾನ
ಎಲ್ಲರಿಗೂ ಅವಕಾಶ ಕೊಡಲಾಗಿದೆ.
ನಿನ್ನೆ ಸ್ವತಃ ಅಮಿತ್ ಶಾ ಅವರು ಶೆಟ್ಟರ್ ಜೊತೆ ಮಾತಾಡಿದ್ದಾರೆ.
ರಾಜ್ಯ, ಜಿಲ್ಲಾ ಮಟ್ಟದ ಕೋರ್ ಕಮಿಟಿಯಲ್ಲಿ ಅವರ ಹೆಸರು ಇತ್ತು.
ಇದು ಮೇಲಿನವರ ತೀರ್ಮಾನ ಎಂದು ತಿಳಿಸಿದ ಮುಖ್ಯಮಂತ್ರಿಗಳು
ಬದಲಾವಣೆ ತರುವಂತಹ ಕಾಲ ಇದು ಎಂದರು.

ಇದನ್ನು ಓದಿ:

ಡ್ಯಾಮೇಜ್ ಕಂಟ್ರೋಲ್

ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಅವಕಾಶ ಕೊಡಬೇಕಾಗಿತ್ತು. ಅದೇ ಕಾರಣಕ್ಕೆ ಜಗದೀಶ್ ಶೆಟ್ಟರ್ ಟಿಕೆಟ್ ತಪ್ಪಿದೆ.
ಅವರ ಎಲ್ಲಾ ಪ್ರಶ್ನೆಗೆ ನಾನು ಉತ್ತರ ನೀಡುವುದಿಲ್ಲ ಎಂದರು.
ಹೊಸ ಬೆಳವಣಿಗಾಗಿ ಈ ಪ್ರಯತ್ನ ಎಂದ. ಶೆಟ್ಟರ್ ರಾಜಿನಾಮೆಯಿಂದ ಬಿಜೆಪಿಗೆ ಸ್ವಲ್ಪ ಹಾನಿಯಾಗಲಿದೆ .ಡ್ಯಾಮೇಜ್ ಕಂಟ್ರೋಲ್‌ಗೆ ಎಲ್ಲಾ ಪ್ರಯತ್ನ ಮಾಡಲಾಗುವುದು ಎಂದರು.

ಇದನ್ನು ಓದಿ:ಚುನಾವಣಾ ಕರ್ತವ್ಯ ಲೋಪ;  ಹು.ಧಾ ಪೂರ್ವ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿ ಮತಗಟ್ಟೆ ಅಧಿಕಾರಿ ನವೀನ ಸೂರ್ಯವಂಶಿರನ್ನು ಅಮಾನತ್ತುಗೊಳಿಸಿ ಡಿಸಿ ಆದೇಶ

Related posts

ಶರಣ ಹೂಗಾರ ಮಾದಯ್ಯ ಜಯಂತಿ ಹಾಗೂ ಹೂಗಾರ ಸಮಾಜದ ಪ್ರಥಮ ಸಮಾವೇಶ

eNEWS LAND Team

ವಿಧಾನ ಪರಿಷತ್ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆ-2022 ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ…

eNEWS LAND Team

ನೈಋತ್ಯ ರೈಲ್ವೆಯ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ 

eNEWS LAND Team