24 C
Hubli
ಸೆಪ್ಟೆಂಬರ್ 27, 2023
eNews Land
ರಾಜ್ಯ

ಹಂತಹಂತವಾಗಿ ಸಮಗ್ರ ಗ್ರಾಮೀಣಾಭಿವೃದ್ಧಿಗೆ ಪಣತೊಟ್ಟ : ಸಿಎಂ ಬೊಮ್ಮಾಯಿ

 

 

 

ಹಂತಹಂತವಾಗಿ ಸಮಗ್ರ ಗ್ರಾಮೀಣಾಭಿವೃದ್ಧಿಗೆ ಪಣತೊಟ್ಟ : ಸಿಎಂ ಬೊಮ್ಮಾಯಿ

ಇಎನ್ಎಲ್
ದಾವಣಗೆರೆ: ಅ.16: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಂದು ಘೋಷಿಸಿದ ಅಮೃತ ಯೋಜನೆಗಳ ಮೂಲಕ ಹಂತ ಹಂತವಾಗಿ ಸಮಗ್ರ ಗ್ರಾಮೀಣ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಅ.16ರ ಹೊನ್ನಾಳಿ ತಾಲ್ಲೂಕಿನ ಕುಂದೂರಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಅಮೃತ ಯೋಜನೆಯಡಿ 2 ಕೋಟಿ ರೂ.ಗಳನ್ನು ಪ್ರತಿ ಗ್ರಾಮ ಪಂಚಾಯತಿಯ ಅಭಿವೃದ್ಧಿಗೆ ಒದಗಿಸಲಾಗುತ್ತಿದೆ. 7500 ಸ್ತ್ರೀ ಶಕ್ತಿ ಸಂಘಗಳಿಗೆ 1.00 ಲಕ್ಷ ನೀಡುವ ಯೋಜನೆ, 75000 ಎಸ್.ಸಿ/ಎಸ್.ಟಿ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಸರ್ಕಾರ ಜಾರಿಗೊಳಿಸುತ್ತಿದೆ ಎಂದ ಅವರು, ಕರ್ನಾಟಕದ ಇತಿಹಾಸದಲ್ಲಿ ಕಂದಾಯ ಸಚಿವರು ಗ್ರಾಮ ವಾಸ್ತವ್ಯ ಮಾಡುತ್ತಿರುವುದು ಇದೇ ಮೊದಲು ಎಂದರು. ಅರ್ಹರಿಗೆ ಸವಲತ್ತುಗಳನ್ನು ನೀಡಿ, ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಸರ್ಕಾರದ ಸೇವೆಗಳು ಮನೆ ಬಾಗಿಲಿಗೆ ತಲುಪಿಸಲು ಈ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ 227 ಗ್ರಾಮಗಳಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳು ಗ್ರಾಮಕ್ಕೆ ಬಂದರೆ, ಸರ್ಕಾರವೇ ಬಂದಂತೆ. ಮುಂದಿನ ದಿನಗಳಲ್ಲಿ ಎಲ್ಲಾ ಸೇವೆಗಳು ನಿಮ್ಮ ಮನೆ ಬಾಗಿಲಿಗೆ ಬರಲಿದೆ. ಜನರಿಂದ ಬಂದ ಅಧಿಕಾರ, ಜನರಿಗೋಸ್ಕರವೇ ಉಪಯೋಗವಾಗಬೇಕು ಎಂಬ ಸಂಕಲ್ಪದಿಂದ ಸರ್ಕಾರ ಕಾರ್ಯನಿರ್ವಹಿಸಲಿದೆ ಎಂದರು.

ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ ರೈತ ವಿದ್ಯಾನಿಧಿ ಕಾರ್ಯಕ್ರಮವನ್ನು ಅಧಿಕಾರಕ್ಕೆ ಬಂದ ಕೂಡಲೇ ಘೋಷಣೆ ಮಾಡಿದ್ದು, ದೇಶದ ಇನ್ಯಾವುದೇ ಭಾಗದಲ್ಲಿ ಇಂತಹ ಯೋಜನೆ ಇಲ್ಲ ಎಂದ ಮುಖ್ಯಮಂತ್ರಿ ಇದಕ್ಕಾಗಿ 1000 ಕೋಟಿ ರೂ.ಗಳ ಅನುದಾನವನ್ನು ಮೀಸಲಿಟ್ಟು ನೀಡಿ 20 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತಹ ಯೋಜನೆ ಜಾರಿಗೆ ತಂದಿದೆ ಎಂದರು.

ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೂಡಲೇ ಸಂಧ್ಯಾ ಸುರಕ್ಷಾ, ವಿಧವಾ ವೇತನ, ದಿವ್ಯಾಂಗರ ವೇತನವನ್ನು ಹೆಚ್ಚಿಸಿ ಮೊದಲನೇ ಸಚಿವ ಸಂಪುಟ ಸಭೆಯಲ್ಲಿಯೇ ಅನುಮೋದನೆ ನೀಡಲಾಗಿದೆ, ನಾಲ್ಕು ಲಕ್ಷ ಗ್ರಾಮೀಣ ಮನೆಗಳನ್ನು ವಸತಿ ರಹಿತರಿಗೆ ನೀಡಲಾಗಿದೆ.

ಹೊನ್ನಾಳಿ ತಾಲ್ಲೂಕನ್ನು ಮಾದರಿ ತಾಲ್ಲೂಕನ್ನಾಗಿ ಮಾಡಲಾಗುವುದೆಂದರು. ತಾಲ್ಲೂಕಿನ ಕುಂದೂರಿನ ಶಾಲೆಗೆ ನೂತನ ಕಟ್ಟಡವನ್ನು ನಿರ್ಮಿಸಲು ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಮೀಸಲಿಡಲಾಗುವುದು ಎಂದು ಘೋಷಿಸಿದ ಮುಖ್ಯಮಂತ್ರಿಗಳು, ಸರ್ಕಾರ ನಿಮ್ಮ ಬದುಕಿನಲ್ಲಿ ಬದಲಾವಣೆ ಹಾಗೂ ಬೆಳಕನ್ನು ತರುವಂತಹ ಕೆಲಸವನ್ನು ಮಾಡಲಿದೆ ಎಂದು ಹೇಳಿದರು.

Related posts

ಹುಬ್ಬಳ್ಳಿಲಿ 11 ವರ್ಷದ ಬಳಿಕ ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಸಭೆಗೆ ಬಂದವರಿಗೆ ವಿಶೇಷ ಗಿಫ್ಟ್ ಸಿಗತ್ತೆ!!

eNewsLand Team

ರಾಜಾಕಾಲುವೆಗಳಲ್ಲಿ ಸರಾಗವಾಗಿ ನೀರು ಹರಿಯಲು ಬೃಹತ್ ಯೋಜನೆ : ಸಿಎಂ

eNEWS LAND Team

ವಿಪ ಕದನ; ಸಂತೆ, ಜಾತ್ರೆ, ಉತ್ಸವ ನಿಷೇಧಿಸಿದ ಜಿಲ್ಲಾಧಿಕಾರಿ ಹೆಗಡೆ

eNewsLand Team