35 C
Hubli
ಮಾರ್ಚ್ 28, 2023
eNews Land
ರಾಜಕೀಯ ರಾಜ್ಯ

ಸೋಲು ಗೆಲುವು ಸಮವಾಗಿ ಸ್ವೀಕರಿಸುತ್ತೇವೆ : ಸಿ.ಎಂ.ಬೊಮ್ಮಾಯಿ

Listen to this article

ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು ಸಿ.ಎಂ.

 

ಇಎನ್ಎಲ್  ಬೆಂಗಳೂರ್, ನ.03:
ಸೋಲು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾದ್ಯಮದವರೊಂದಿಗೆ ಮಾತನಾಡುತ್ತಿದ್ದರು. ಉಪಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು , ಸಿಂಧಿಗಿಯಲ್ಲಿ ಗೆಲುವಿಗೆ ಶ್ರಮಿಸಿದ ಪಕ್ಷದ ನಾಯಕರಿಗೆ ಹಾಗೂ ಮತಹಾಕಿದ ಮಹಾಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದರು.

ಹಾನಗಲ್ ಸೋಲಿನ ಕುರಿತು ನಾವು ಆತ್ಮವಿಮರ್ಶೆ ಮಾಡಿಕೊಳ್ಳುತ್ತಿದ್ದೇವೆ. ಈ ಅಂತರವನ್ನು ನಾವು ಸಾಧಿಸಬಹುದಾಗಿತ್ತು. ಕಾರಣಗಳನ್ನು ವಿಶ್ಲೇಷಿಸಿ, ಅವುಗಳನ್ನು ಸರಿಪಡಿಸಿ ಮುಂದು ಹೋಗುವ ಕೆಲಸವನ್ನು ಮಾಡುತ್ತೇವೆ ಎಂದರು.

ಹಾನಗಲ್ ನಲ್ಲಿ ದಿ.ಸಿ.ಎಂ.ಉದಾಸಿಯವರಿಗಿದ್ದ ಜನಪ್ರಿಯತೆಯನ್ನು ಸ್ವಲ್ಪಪಟ್ಟಿಗೆ ಮುಂದುವರೆಸಲಾಗಲಿಲ್ಲ. ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಜನ ಅವರನ್ನು ಬೆಂಬಲಿಸಿದ್ದಾರೆ ಎಂದರು.

ಸರ್ಕಾರದ 100 ದಿನ:
ಮುಖ್ಯಮಂತ್ರಿಯಾಗಿ 100 ದಿನಗಳಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಒಂದು ವರ್ಷದಂತೆ ಪ್ರಮುಖ ಘಟ್ಟವೇನಲ್ಲ. ಆದರೆ, 100 ದಿನದಲ್ಲಿ ಸರ್ಕಾರದ ದಿಕ್ಕು, ಭರವಸೆ, ಸಮಸ್ಯೆಗಳನ್ನು ಎದುರಿಸಿದ ರೀತಿ, ಇವುಗಳ ಸ್ಥೂಲ ಮಾಹಿತಿ ನೀಡಲಾಗುವುದು ಎಂದರು.

ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗೆ ಉಪಚುನಾವಣೆ ಫಲಿತಾಂಶ ದಿಕ್ಸೂಚಿ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ವಿರೋಧ ಪಕ್ಷದವರು ಹಾಗೆ ಹೇಳಬೇಕು. ಸಿಂಧಗಿಯಲ್ಲಿ 31000 ದ ದೊಡ್ಡ ಅಂತರದಿಂದ ಕಾಂಗ್ರೆಸ್ ಸೋತಿದೆ. ಅದಕ್ಕೆ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

Related posts

ವಿಪ ಚುನಾವಣೆ: 15ಕ್ಕಿಂತ ಹೆಚ್ಚಿನ ಸ್ಥಾನ ಗೆಲ್ತೇವೆ: ಸಿಸಿಪಿ

eNEWS LAND Team

ಲಾಕ್ ಡೌನ್ ಇಲ್ಲ: ವದಂತಿಗೆ ಕಿವಿಕೊಡಬೇಡಿ: ಸಿಎಂ

eNewsLand Team

ಜಪಾನ್, ಫ್ರಾನ್ಸ್ ದೂತಾವಾಸದ ಅಧಿಕಾರಿಗಳ ಜತೆ ಸಿಎಂ ಬೊಮ್ಮಾಯಿ‌ ಸೌಹಾರ್ದ ಮಾತುಕತೆ

eNewsLand Team