35 C
Hubli
ಮಾರ್ಚ್ 19, 2024
eNews Land
ಮಹಿಳೆ ರಾಜ್ಯ

ಸ್ತ್ರೀಶಕ್ತಿ ಸಂಘದಲ್ಲಿದ್ದಿರಾ? ಇಲ್ಲಿದೆ ಗುಡ್ ನ್ಯೂಸ್‌ ಅಕ್ಟೋಬರ್ 2ಕ್ಕೆ..

ಇಎನ್ಎಲ್ ಬೆಂಗಳೂರು: ಸ್ತ್ರೀಶಕ್ತಿ ಸಂಘಗಳಿಗೆ ಆರ್ಥಿಕ ನೆರವು ನೀಡುವ ಯೋಜನೆಯನ್ನು ಅಕ್ಟೋಬರ್ 2 ರಂದು ಚಾಲನೆ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, – ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಹಾಗೂ ಸುಮಂಗಲಿ ಸೇವ ಆಶ್ರಮ, ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶವನ್ನು ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಸ್ತ್ರೀಶಕ್ತಿ ಸಂಘಗಳು ರಾಜ್ಯದ ಆರ್ಥಿಕತೆಗೆ ಕೊಡುಗೆ ನೀಡಲು ಅನುಕೂಲವಾಗುವಂತೆ ಪ್ರಥಮ ಬಾರಿ ಆಯವ್ಯಯದಲ್ಲಿ 1.5 ಲಕ್ಷ ರೂ.ಗಳ ಆರ್ಥಿಕ ನೆರವು, ಆ್ಯಂಕರ್ ಬ್ಯಾಂಕ್ ಜೋಡಣೆ, ಯಂತ್ರೋಪಕರಣ, ಪ್ರಾಜೆಕ್ಟ್‌’ಗಳು, ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಮಾಡಲಾಗುವುದು. ಅಮೆಜಾನ್ ನಂತಹ ಆನ್‍ಲೈನ್ ವೇದಿಕೆಗಳಲ್ಲಿ ಈ ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗುವುದು. ಪ್ರಾಯೋಗಿಕವಾಗಿ ಎಲಿವೇಟ್ ಕಾರ್ಯಕ್ರಮ ಪ್ರಾರಂಭಿಸಿದ್ದು, ಒಂದು ಸ್ತ್ರೀಶಕ್ತಿ ಸಂಘ ತಿಂಗಳಿಗೆ ಸುಮಾರು 50 ಲಕ್ಷ ವಹಿವಾಟನ್ನು ಮಾಡುತ್ತಿದೆ. ಇದು ಸಂಘಟಿತವಾದ ಶ್ರಮದ ಶಕ್ತಿ ಎಂದು ತಿಳಿಸಿದರು.

ಇದನ್ನೂ ಓದಿ

ಕೂಲಿಕಾರರೊಂದಿಗೆ ಯೋಗದಿನ ಆಚರಿಸಿದ ತಾ.ಪಂ ಇ.ಓ ಭಾಗ್ಯಶ್ರಿ ಜಾಗೀರದಾರ

ರಾಜ್ಯದ ಗ್ರಾಮೀಣ ಹಾಗೂ ನಗರ ಪ್ರದೇಶದ ಸ್ತ್ರೀಶಕ್ತಿಯ ಸಬಲೀಕರಣ ಆಗಬೇಕು. ನಮ್ಮ ಸ್ಥಳೀಯಮಟ್ಟದ ಸಂಘಸಂಸ್ಥೆಗಳ ಉತ್ಪನ್ನಗಳು ವಿದೇಶದಲ್ಲಿ ಮಾರಾಟವಾಗಬೇಕು ಎನ್ನುವ ಆಸೆ ಸರ್ಕಾರದ್ದು. ಆಗ ನಮ್ಮ ಆರ್ಥಿಕತೆಗೆ ಬಹಳ ಶಕ್ತಿ ಬರುತ್ತಿದೆ. ಈ ದೇಶದಲ್ಲಿನ ಮಹಿಳೆಯರ ದುಡಿಮೆಗೆ ಬೆಲೆ ಕೊಡಬೇಕಿದೆ. ಅವರಿಗೆ ಆರ್ಥಿಕ ಸ್ವಾತಂತ್ರ್ಯ ಬಂದಾಗ ಶೈಕ್ಷಣಿಕ, ಸಾಮಾಜಿಕವಾಗಿಯೂ ಸಬಲರಾಗುತ್ತಾರೆ. ಈ ಹಿನ್ನೆಲೆಯಲ್ಲಿ ಸೇವಾಸಂಸ್ಥೆಗಳು ಸಮಾನತೆಯ ಕ್ರಾಂತಿ ತರುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಒಳ್ಳೆಯ ಕೆಲಸ ಮಾಡುವ ಚಿಂತನೆ ಪ್ರೇರಣೆ ದೊರಕುತ್ತದೆ. ಒಳ್ಳೆಯ ಕೆಲಸಗಳನ್ನು ಮಾಡುವ ಚಿಂತನೆ ಹಾಗೂ ಕ್ರಿಯಾಯೋಜನೆ ಇರಬೇಕು. ಪ್ರತಿ ವರ್ಷ ಕನಿಷ್ಠ 5 ಕ್ಷೇತ್ರಗಳಿಗೆ ಗುರಿ ನಿಗದಿಸಿ ಸಾಧಿಸಲು ಪ್ರಯತ್ನಸಿ, ಸರ್ಕಾರವೂ ಪೂರಕ ಸಹಕಾರವನ್ನು ನೀಡುತ್ತದೆ ಎಂದರು.

Related posts

ಹಿಜಾಬ್ ವಿವಾದ ತಣ್ಣಗಾಗಿಸಲು ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ಮೂರು ದಿನ ರಜೆ

eNewsLand Team

ಜಪಾನ್, ಫ್ರಾನ್ಸ್ ದೂತಾವಾಸದ ಅಧಿಕಾರಿಗಳ ಜತೆ ಸಿಎಂ ಬೊಮ್ಮಾಯಿ‌ ಸೌಹಾರ್ದ ಮಾತುಕತೆ

eNewsLand Team

ರಾಜ್ಯೋತ್ಸವಕ್ಕೆ ಸಿಎಂ ಬೊಮ್ಮಾಯಿ‌ ಚಾಲನೆ

eNEWS LAND Team